ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್: 10ನೇ ವರ್ಷದ ವಾರ್ಷಿಕೋತ್ಸವ

0

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಹತ್ತನೇ ವರ್ಷದ ವಾರ್ಷಿಕೋತ್ಸವ, ಆಟೋಟ ಸ್ಪರ್ಧೆಗಳು ಜ.4ರಂದು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಮಾತನಾಡಿ ಸಂಘಟನೆಯು ಇನ್ನಷ್ಟು ಸಮಾಜ ಸೇವೆಯಲ್ಲಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಇನ್ನಷ್ಟು ಸಂಘಟನೆ ಬಳಪಡಿಸುವಂತೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ., ಉರುವಾಲು ಪ್ರತಿಮ ನಿಲಯ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ ಕಡ್ತಿಲ, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ ನವೀನ್, ಮಡಂತ್ಯಾರು ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಯ ಕೆ. ಪಾಂಡವರಕಲ್ಲು, ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಶೆಟ್ಟಿ ಪದೆಂಜಿಲ, ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ದೀಕ್ಷಿತ್ ಕೋಟೆ ಅವರು ವಹಿಸಿದ್ದರು. ಮತ್ತು ಅಂಗನವಾಡಿ ಕಾರ್ಯಕರ್ತೆ ಪುಷ್ಪವತಿ ಭಂಡಾರದ ಕೋಟ್ಯ ಅವರ ಸೇವೆಯನ್ನು ಮೆಚ್ಚಿ ಸನ್ಮಾನಿಸಲಾಯಿತು. ಹಾಗೂ ಸಂಗೀತ, ಭರತನಾಟ್ಯದಲ್ಲಿ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಸಾನ್ವಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಆಟೋಟ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು, ಸ್ಥಳೀಯ ಪ್ರತಿಭೆಗಳಿಂದ ಮನೋರಂಜನ ಕಾರ್ಯಕ್ರಮ ಹಾಗೂ ವಿಠಲ ನಾಯಕ್ ಕಲ್ಲಡ್ಕ ಅವರಿಂದ ತುಳು ಹಾಸ್ಯ ಸಂಭ್ರಮ ನಡೆಯಿತು. ಸಂಘದ ಕಾರ್ಯದರ್ಶಿ ನವೀನ್ ಪಡೀಲ್ ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
✍️ ಹರ್ಷ ಬಳ್ಳಮಂಜ

LEAVE A REPLY

Please enter your comment!
Please enter your name here