






ಬೆಳ್ತಂಗಡಿ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ರವರು ಜ.6ರಂದು ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ್ದು ಬೆಳಗ್ಗೆ 10 ಘಂಟೆಗೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಮಲೆಕುಡಿಯ ಸಮುದಾಯದ ಕಾಲೋನಿಗೆ ಭೇಟಿ ನೀಡಿ ಅಲ್ಲಿ ಜನರ ಕುಂದುಕೊರತೆಗಳನ್ನು ಆಲಿಸಿದರು. ನಂತರ ಬೆಳ್ತಂಗಡಿ ನಗರದ ಮಂಜುನಾಥ ಕಲಾ ಭವನದ ಪಿನಾಕಿ ಸಭಾಂಗಣದಲ್ಲಿ ಪ.ಜಾತಿ/ಪಂಗಡಗಳ ಅಲೆಮಾರಿ ಬೈರ, ನಲಿಕೆ, ಪಂಬದ, ಮಲೆಕುಡಿಯ ಸಮುದಾಯಗಳ ಜನಸ್ಪಂದನ ಮತ್ತು ಕುಂದುಕೊರತೆಗಳ ಸಭೆ ನಡೆಸಿದರು.





ಸಭೆಯಲ್ಲಿ ಅಲೆಮಾರಿ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕ ಆನಂದ್ ಕುಮಾರ್, ತಹಶೀಲ್ದಾರ್ ಪೃಥ್ವಿ ಸಾನಿಕಂ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಧನಂಜಯ್, ಬೆಳ್ತಂಗಡಿ ವಣ್ಯಜೀವಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ ವೇಣೂರು ವಲಯ ಅರಣ್ಯಾಧಿಕಾರಿ ಭರತ್, ಗ್ಯಾರಂಟಿ ಅನುಷ್ಟಾನ ಸಮಿತಿಯ ತಾಲೂಕು ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಾಲೂಕು ಅನುಷ್ಠಾನ ಸಮಿತಿಯ ಸದಸ್ಯರಾದ ನೇಮಿರಾಜ್, ಸೌಮ್ಯ, ಜಯಾನಂದ, ಮೆರಿಟಾ ಪಿಂಟೋ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿದರು.









