









ಮಡಂತ್ಯಾರು: ಬಂಟ್ವಾಳ ತಾಲೂಕಿನ ಕಡೇಶಿವಾಲಯ, ಗೋಳ್ತಮಜಲು, ಕನ್ಯಾನ, ಇಡ್ಕಿದು, ಚೆನ್ಯೆತ್ತೋಡಿ ಗ್ರಾಮ ಪಂಚಾಯತ್ ಸದಸ್ಯರು ಮಡಂತ್ಯಾರು ಪಂಚಾಯತ್ ಗೆ ಜ. 6ರಂದು ಭೇಟಿ ನೀಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮತ್ತು ತರಬೇತಿಯಲ್ಲಿ ಪಾಲ್ಗೊಂಡರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಎ. ಎಸ್.ರೂಪ, ಉಪಾಧ್ಯಕ್ಷ ಕೆ. ಗೋಪಾಲಕೃಷ್ಣ, ಸದಸ್ಯ ವಿಶ್ವನಾಥ ಪೂಜಾರಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.









