






ಆರಂಬೋಡಿ: ಗ್ರಾಮ ಪಂಚಾಯತ್ ಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಭೇಟಿ ನೀಡಿ ಪಂಚಾಯತ್ ಸದಸ್ಯರೊಂದಿಗೆ ಸಂವಾದ ನಡೆಸಿದರು. ಕಾಂಗ್ರೆಸ್ ಪಕ್ಷದ ವಲಯ ಅಧ್ಯಕ್ಷ ಹರೀಶ್ ಶೆಟ್ಟಿ ಹೂ ಗುಚ್ಛ ನೀಡಿ ಶಾಸಕರನ್ನು ಸ್ವಾಗತಿಸಿದರು.



ಸಂವಾದ ವೇದಿಕೆಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಡೆಪ್ಯುಟಿ ತಹಸೀಲ್ದಾರ್, ಪಂಚಾಯತ್ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ಕಾಶಿಪಟ್ನ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಪಂಚಾಯತ್ ಸದಸ್ಯರು, ಹಿರಿಯ ಮುಖಂಡ ಸಂಜೀವ ಶೆಟ್ಟಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿದರು.









