ಕನ್ಯಾಡಿ: ಸೇವಾಭಾರತಿಯಿಂದ ಜಿಲ್ಲಾಧಿಕಾರಿ ಅವರ ಭೇಟಿ

0

ಕನ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರನ್ನು ಸೇವಾಭಾರತಿ ತಂಡ ಜ. 6ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು ಆಯೋಜಿಸುವ ಬಗ್ಗೆ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು. ಸೇವಾಧಾಮದ ಸಂಸ್ಥಾಪಕ ಕೆ. ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಜೈ ರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ. ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here