ಲಾಯಿಲ: ಗುಡ್ಡಕ್ಕೆ ಆಕಸ್ಮಿಕ ಬೆಂಕಿ-ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆ; ತಪ್ಪಿದ ಅನಾಹುತ

0

ಬೆಳ್ತಂಗಡಿ: ಲಾಯಿಲ ಗ್ರಾಮದ ಕಕ್ಕೇನ ಪೆಟ್ರೋಲ್ ಪಂಪ್ ಮುಂಭಾಗದ ಗುಡ್ಡಕ್ಕೆ ಜ.8ರಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ಬಿದ್ದಿದ್ದು, ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಅನಾಹುತ ತಪ್ಪಿದೆ.

ವಿದ್ಯುತ್ ಅವಘಡದಿಂದ ಅನಾಹುತ ಸಂಭವಿಸದೆ ಎಂದು ಶಂಕಿಸಲಾಗಿದೆ. ಗುಡ್ಡದಲ್ಲಿ ಹುಲ್ಲು ಬೆಳೆದಿತ್ತು. ಬಿಸಿಲಿಗೆ ಒಣಗಿ ನಿಂತಿದ್ದ ಈ ಹುಲ್ಲಿಗೆ ಹೊತ್ತಿಕೊಂಡ ಬೆಂಕಿ ಕ್ಷಣಾರ್ಥದಲ್ಲಿ ಅರ್ಧಕ್ಕೂ ಹೆಚ್ಚು ಗುಡ್ಡ ಬೆಂಕಿಯ ಕೆನ್ನಾಲಿಗೆ ಕಾಣಿಸಿಕೊಳ್ಳುತ್ತಿದ್ದಂತೆ ಗುಡ್ಡದ ಕೆಳಭಾಗದಲ್ಲಿರುವ ಬಣವಿಗಳಿಗೆ ಬೆಂಕಿ ಹೊತ್ತುಕೊಳ್ಳುತ್ತೆ ಎಂದುಕೊಂಡ ಅಲ್ಲಿನ ಸ್ಥಳೀಯರು ಕೂಡಾ ಬಕೆಟ್ ಮೂಲಕ ನೀರನ್ನು ತೆಗೆದುಕೊಂಡು ಬೆಂಕಿಯನ್ನು ಹಾರಿಸಲು ಮುಂದಾದಾಗ ಗುಡ್ಡಕ್ಕೆ ಹೊತ್ತಿಕೊಂಡ ಬೆಂಕಿ ಪ್ರಖರತೆ ಹೆಚ್ಚಾಗಿದ್ದನ್ನು ಮನಗಂಡು ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದರು.

ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮುಂದೆ ಆಗುವ ಅನಾಹುತಗಳನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಆಗಮಿಸುವ ಪೂರ್ವದಲ್ಲಿ ಗುಡ್ಡದಲ್ಲಿನ ಅನೇಕ ಗಿಡಮರಗಳು ಬೆಂಕಿಗೆ ಸುಟ್ಟು ಕರಕಲಾಗಿವೆ. ಬೆಂಕಿಯ ಅನಾಹುತವನ್ನು ಸರಿಯಾದ ಸಮಯಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಕ್ಷಮತೆಯ ಬಗ್ಗೆ ಸ್ಥಳೀಯರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here