






ಉಜಿರೆ: ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿರ್ವಹಣೆ ಕುರಿತಂತೆ ಜ.8ರಂದು ಉಜಿರೆ ನಗರದಲ್ಲಿ ಜಾಗೃತಿ ಜಾಥಾ ನಡೆಯಿತು. ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

ಬೆಳ್ತಂಗಡಿ ಸಂಚಾರ ಪೊಲೀಸ್ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳು ಸಂಚಾರದ ಬಗ್ಗೆ ಸಾರ್ವಜನಿಕರ ಗಮನ ಸೆಳೆದರು. ನಾನಾ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಜಾಥಾ ಹೊರಟ ಮಕ್ಕಳು ಉಜಿರೆ ವೃತ್ತ ತಲುಪಿದರು.



ಗಮನ ಸೆಳೆದ ಫಲಕ: ಶಾಲಾ ಮಕ್ಕಳು ಹಿಡಿದಿದ್ದ ಘೋಷಣಾ ಫಲಕ ಗಮನ ಸೆಳೆಯಿತು. ವೇಗವಲ್ಲ ಜೀವನ ಮುಖ್ಯ ಹೀಗೆ ಬಗೆ ಬಗೆಯ ಘೋಷಣೆಗಳಿದ್ದವು.
ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ಪಿಎಸ್ಐ ಕಿಶೋರ್ ಮಾತನಾಡಿ ನಗರಗಳಲ್ಲಿ ಪಾದಚಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕೆಲವು ಸಂಚಾರ ನಿಯಮದ ಕಾನೂನುಗಳನ್ನು ಮಾರ್ಪಾಡು ಮಾಡಿ ಜಾರಿ ಮಾಡುವುದು ಅನಿವಾರ್ಯವಾಗಿದ್ದು, ಇದರ ಜೊತೆಗೆ ಪ್ರತಿಯೊಬ್ಬರೂ ಸಂಚಾರ ನಿಯಮವನ್ನು ಪಾಲಿಸಿ, ರಸ್ತೆ ಸುರಕ್ಷತೆಯತ್ತ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ, ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿಗಳು ಹೆಲ್ಮೆಟ್ ಪ್ರಾಮುಖ್ಯತೆಯ ಬಗ್ಗೆ ಬೀದಿ ನಾಟಕ ಪ್ರದರ್ಶಿಸಿದರು.









