






ಬೆಳ್ತಂಗಡಿ: ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ, ಪದಾಧಿಕಾರಿಗಳು ಮತ್ತು ನೂತನ ನ್ಯಾಯಾಲಯ ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಜ.8ರಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸರಕಾರದಿಂದ ರೂ. 9 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ, ಸಂಘದ ಉಪಾಧ್ಯಕ್ಷ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಎ., ನಿಕಟ ಪೂರ್ವ ಅಧ್ಯಕ್ಷ ವಸಂತ ಮರಕಡ ಮತ್ತು ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. ಜೊತೆಗಿದ್ದರು.









