ಮುಂಡಾಜೆ: ಅಕ್ರಮ ಮರಳು ಸಾಗಾಟ: ಪಿಕಪ್ ವಶ

0

ಧರ್ಮಸ್ಥಳ: ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡಾಜೆ ಗ್ರಾಮದ ಗುಂಡಿ ವನದುರ್ಗ ದೇವಸ್ಥಾನದ ರಸ್ತೆಯಲ್ಲಿ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಧರ್ಮಸ್ಥಳ ಠಾಣೆಯ ಪೊಲೀಸರು ವಶಕ್ಕೆ ಪಡೆದು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ಪಿಕಪ್ ವಾಹನವನ್ನು ವಸಪಡಿಸಿಕೊಂಡು ಮೋಹನ್, ಆನಂದ್ ಇಬ್ರಾಹಿಂ ವಿರುದ್ದ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ. 8 ವನದುರ್ಗ ದೇವಸ್ಥಾನದ ರಸ್ತೆಯಲ್ಲಿ ಬರುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ನಿಲ್ಲಿಸಲು ಸೂಚನೆ ನೀಡಿದರು. ವಾಹನ ಪರಿಶೀಲಿಸಿದಾಗ ಮರಳು ಕಂಡು ಬಂದಿದೆ ಎಂದು ತಿಳಿದು ಬಂದಿದೆ.

ಯಾವುದೇ ಪರವಾನಗಿ ಇಲ್ಲದೆ ರಾಜ್ಯ ಸರ್ಕಾರಕ್ಕೆ ರಾಜಧನ ಪಾವತಿಸದೆ ಅಕ್ರಮವಾಗಿ ಮರಳನ್ನು ಕಳ್ಳತನ ಮಾಡಿ ಪಿಕಪ್‌ನಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here