








ಬೆಳ್ತಂಗಡಿ: ಕರ್ನಾಟಕ ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಸೇವಾ ಸಂಸ್ಥೆಗಳು, ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ವಿವೇಕ ವಿದ್ಯಾರ್ಥಿ’ ಎಂಬ ವ್ಯಕ್ತಿತ್ವ ನಿರ್ಮಾಣಕಾರಿ ಲಿಖಿತ ಪರೀಕ್ಷೆಯಲ್ಲಿ ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿಯ ಯುಕ್ತ ಕೆ. ಗೌಡ ಜಿಲ್ಲಾಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದಿರುತ್ತಾರೆ. ಎಂಟನೇ ತರಗತಿಯ ತನ್ವಿ ಬಿ.ಎಮ್. ಮತ್ತು 9ನೇ ತರಗತಿಯ ವೃಷ್ಟಿ ಜೆ. ಶೆಟ್ಟಿ ತಾಲೂಕು ಮಟ್ಟದಲ್ಲಿ ಮೊದಲನೇ ಸ್ಥಾನ ಪಡೆದಿರುತ್ತಾರೆ.









