






ಬೆಳ್ತಂಗಡಿ: ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್. ಲೋಬೋ ಮತ್ತು ಪದಾಧಿಕಾರಿಗಳ ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಜ.8ರಂದು ಬೆಂಗಳೂರಿನಲ್ಲಿ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು, ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಎಚ್. ಟಿ. ನರೇಂದ್ರ ಪ್ರಸಾದ್, ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ, ಕರ್ನಾಟಕ ಸರ್ಕಾರದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಭರತ್ ಕುಮಾರ್ ಅವರುಗಳನ್ನು ಭೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆಯ ವಿಚಾರದಲ್ಲಿ ಮಾತುಕತೆ ನಡೆಸಿದರು.





ಉಪಾಧ್ಯಕ್ಷ ಶ್ರೀನಿವಾಸ ಗೌಡ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್ ಎ., ನಿಕಟ ಪೂರ್ವ ಅಧ್ಯಕ್ಷ ವಸಂತ ಮರಕಡ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ. ಅವರು ಉಪಸ್ಥಿತರಿದ್ದರು.









