ಬಾರ್ಯ: ಮಹಾವಿಷ್ಣು ದೇವಸ್ಥಾನದಲ್ಲಿ ಕುಡಿಯುವ ಶುದ್ಧ ನೀರಿನ ಘಟಕ ಉದ್ಘಾಟನೆ

0

ಬೆಳ್ತಂಗಡಿ: ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಉಳಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧರ್ಮದರ್ಶಿಗಳು ಸೇವಾ ರೂಪದಲ್ಲಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಡಾ. ಯೋಗಿಂದ್ರ ಭಟ್ ಉಳಿ ಉದ್ಘಾಟಿಸಿ ಶುಭ ಹಾರೈಸಿದರು.

ಯಕ್ಷದ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿ, ದೇವಸ್ಥಾನದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ, ಕಾರ್ಯದರ್ಶಿ ಪ್ರಶಾಂತ ಪೈ, ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಅರ್ಚಕ ಗುರುಪ್ರಸಾದ ನೂರಿತ್ತಾಯ, ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ, ಬಾರ್ಯ ಸಿ.ಎ ಬ್ಯಾಂಕಿನ ಅಧ್ಯಕ್ಷ ಸೇಸಪ್ಪ ಸಾಲಿಯಾನ್, ಯಜ್ಞೇಶ್ ಪುತ್ತಿಲ, ಸೇವಾ ಟ್ರಸ್ಟಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ನೀರಿನ ಘಟಕದ ಕೊಡುಗೆಯನ್ನು ನೀಡಿದ ಡಾ. ಯೋಗಿಂದ್ರ ಭಟ್ಟರಿಗೆ ದೇವಸ್ಥಾನದ ಪರವಾಗಿ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಕೃತಜ್ಞತೆ, ಸಲ್ಲಿಸಿದರು.

LEAVE A REPLY

Please enter your comment!
Please enter your name here