






ಬೆಳ್ತಂಗಡಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಇತರೆ ಪರೀಕ್ಷೆಗಳು), ಬೆಂಗಳೂರು ಅವರಿಂದ ನಡೆಸಲಾದ ಚಿತ್ರಕಲಾ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ದಾಖಲಿಸಿದೆ.


ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಚಿತ್ರಕಲಾ ಶಿಕ್ಷಕ ಚಿದಾನಂದ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.









