ಕುಕ್ಕೇಡಿ: ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ-ಉಸ್ತುವಾರಿ ಸಚಿವರ ಭಾಗಿ: ರಕ್ಷಿತ್ ಶಿವರಾಂ

0

ಬೆಳ್ತಂಗಡಿ: ತಾಲೂಕಿನ ಕುಕ್ಕೇಡಿಯಲ್ಲಿ ನವೀಕರಣಗೊಂಡಿರುವ ಅಂಬೇಡ್ಕರ್ ಭವನದ ಉದ್ಘಾಟನೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆಗಮಿಸಲಿರುವುದಾಗಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

ಜ. 17ರಂದು ಬೆಳಗ್ಗೆ ಮಂಗಳೂರಿಗೆ ಆಗಮಿಸುವ ಸಚಿವರು ಬಳಿಕ ಕುಕ್ಕೇಡಿಗೆ ಆಗಮಿಸಿ ಕುಕ್ಕೇಡಿಯ ಅಂಬೇಡ್ಕರ್ ಭವನದ ಉದ್ಘಾಟನೆ ನೆರವೇರಿಸಲಿದ್ದು ಬಳಿಕ 94ಸಿ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here