ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

0

ಉಜಿರೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 14 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.100 ಫಲಿತಾಂಶ ಬಂದಿರುತ್ತದೆ. ವಿದ್ಯಾರ್ಥಿಗಳಾದ ಭುವನೇಶ್,ತೇಜಸ್ ಕುಲಾಲ್, ರಿತ್ವಿಜ ಹಾಗೂ ತಶ್ವಿ ವಿಶಿಷ್ಟ ಶ್ರೇಣಿ ಹಾಗೂ 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ಚಿತ್ರಕಲಾ ಶಿಕ್ಷಕ ರವಿಚಂದ್ರ ತರಬೇತಿ ನೀಡಿರುತ್ತಾರೆ. ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

LEAVE A REPLY

Please enter your comment!
Please enter your name here