









ಬೆಳ್ತಂಗಡಿ: ತಾಲೂಕಿನಾದ್ಯಂತ ಚಿರತೆ ಹಾವಳಿ ನಿರಂತರವಾಗಿ ಮುಂದುವರಿದಿದ್ದು, ಜ.18ರಂದು ತಡ ರಾತ್ರಿ ನಡ ಕನ್ಯಾಡಿಯಲ್ಲಿ ರಸ್ತೆಬದಿಯಲ್ಲಿ ಚಿರತೆ ನೋಡಲು ಸಿಕ್ಕಿದ್ದು ಜನರಿಗೆ ಭಯ ಮೂಡಿಸಿದೆ. ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು ಹೆಚ್ಚಾಗಿದೆ. ನಡ ಗ್ರಾಮದ ಕನ್ಯಾಡಿಯಲ್ಲಿ ಜ.18ರಂದು ಬೆಳಿಗ್ಗೆ ಸಾಕುನಾಯಿಯನ್ನು ಚಿರತೆ ಹೊತ್ತೊಯ್ದ ಪ್ರಕರಣ ನಡೆದಿದೆ. ಮಲವಂತಿಗೆ ಗ್ರಾಮದ ದಿಡುಪೆ-ಪರಂಬೇರು ರಸ್ತೆಯ ಕರಿಯಂದೂರು ಕ್ರಾಸ್ ಬಳಿ ಸಂಜೆ ಸ್ಥಳೀಯರಿಗೆ ಚಿರತೆ ಕಾಣಸಿಕ್ಕಿದೆ. ಚಿರತೆಯ ಓಡಾಟ ಜನರಲ್ಲಿ ಭಯ ಹೆಚ್ಚಿಸಿದೆ.









