ದಿ|ಕೆ. ವಸಂತ ಬಂಗೇರರ 80ನೇ ಹುಟ್ಟುಹಬ್ಬದ ಪ್ರಯುಕ್ತ 8ನೇ ವರ್ಷದ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ-11 ಗಂಟೆಗೆ ಸಭಾ ಕಾರ್ಯಕ್ರಮ

0

ಬೆಳ್ತಂಗಡಿ: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರ ಅಭಿಮಾನಿಗಳ ಸಮಿತಿ, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ ಸುಮಾರು ಐದು ದಶಕಗಳ ಕಾಲ ರಾಜಕೀಯ ರಂಗದಲ್ಲಿ ಸೇವೆ ಸಲ್ಲಿಸಿ ಜನಸೇವೆಗಾಗಿ ತನ್ನನ್ನು ತಾನು ಮುಡಿಪಾಗಿಟ್ಟು ಮೇ. 8. 2024ರಂದು ವಿಧಿವಶರಾದ ಬೆಳ್ತಂಗಡಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯ ರೂವಾರಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 80ನೇ ಹುಟ್ಟುಹಬ್ಬದ 8ನೇ ವರ್ಷದ ಬೃಹತ್ ರಕ್ತದಾನ ಶಿಬಿರಕ್ಕೆ ಜ.19ರಂದು ಬೆಳಗ್ಗೆ ಚಾಲನೆ ನೀಡಲಾಯಿತು.

ಉಪನ್ಯಾಸಕ ಸುಜಿತ್ ಅವರು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಬೆಳಿಗ್ಗೆ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರ ಅವರ ಸಾಧನೆಗಳ ಬಗ್ಗೆ ಹಾಗೂ ಅವರ ಜೀವನ ವಿಶೇಷತೆಯ ಬಗ್ಗೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ರಾಜೇಶ್ವರಿ ಚೇತನ್ ರವರು ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ.

ಕಳೆದ ಬಾರಿ 150 ಜನ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಬಂದಿದ್ದು, ಸುಮಾರು 125 ಜನರು ಯಶಸ್ವಿಯಾಗಿ ರಕ್ತದಾನ ಮಾಡಿದ್ದಾರೆ. ಈ ಬಾರಿಯೂ ರಕ್ತದಾನ ಮಾಡಲು ಜನರು ಸೇರಿದ್ದು ನೂರಕ್ಕೂ ಮಿಕ್ಕಿ ಜನರು ರಕ್ತದಾನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂಬ ನಿರೀಕ್ಷೆ ಇದೆ.

LEAVE A REPLY

Please enter your comment!
Please enter your name here