







ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬೋಲ್ಮಾನರ್ ಓಂ ಶಕ್ತಿ ಭಜನಾ ಮಂಡಳಿಯ ಗೌರವಾಧ್ಯಕ್ಷ ದಾಮೋದರ ಗೌಡ, ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ದಾಮೋದರ್ ಗೌಡ ಮೂಲ್ಯ ಅವರು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಸ್ವಾಮಿ ವಿವೇಕಾನಂದರು ನಡೆದು ಬಂದ ಹಾದಿ ಮತ್ತು ಮಾಡಿದಂತಹ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಶಾಲಾ ವಿದ್ಯಾರ್ಥಿಗಳಿಂದ ಸ್ವಾಮಿ ವಿವೇಕಾನಂದರ ಭಾಷಣವನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಗೌರೀಶ್ ಸ್ವಾಗತಿಸಿ, ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ರವರು ನಿರ್ವಹಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಸಹಕರಿಸಿದರು.









