10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಚಂದ್ರೇಗೌಡ ಬಂಧನ

0

ಬೆಳ್ತಂಗಡಿ: 10 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 60/2009ರಂತೆ 420 ಐಪಿಸಿಯಡಿ ದಾಖಲಾಗಿದ್ದ ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ನಿವಾಸಿ ಎಸ್.ಎನ್. ಚಂದ್ರೇಗೌಡ ಎಂಬಾತನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಜ. 20ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

LEAVE A REPLY

Please enter your comment!
Please enter your name here