






ಗುರುವಾಯನಕೆರೆ: ಶ್ರೀ. ಕ್ಷೇ. ಧ. ಗ್ರಾ. ಯೋಜನೆಯ ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಹಿಳೆಯರಿಗೆ ಮಧುಮಗಳ ಶೃಂಗಾರ 6 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಗುರುವಾಯನಕೆರೆ ಪಂಚಾಯತ್ ಹಾಲ್ ನಲ್ಲಿ ಸಮರೂಪ ಸಮಾರಂಭ ಮಾಡಲಾಯಿತು.


ಸಮಾರಂಭದ ಅಧ್ಯಕ್ಷತೆಯನ್ನು ದೇವಕಿ ಭಟ್, ಸಂಪನ್ಮೂಲ ವ್ಯಕ್ತಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಸುವರ್ಣ ಉಪಸ್ಥಿತರಿದ್ದರು. ಜ್ಞಾನ ವಿಕಾಸ ವಿಭಾಗದ ನಿರ್ದೇಶಕ ವಿಠಲ್ ಪೂಜಾರಿರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸವಿವಿವರವಾಗಿ ಮಾಹಿತಿ ನೀಡಿದರು. ಬ್ಯುಟಿಶಿಯನ್ ತರಬೇತಿ ಶಿಕ್ಷಕಿ ನೇತ್ರರವರು ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರು ಯಶೋಧ ಸ್ವಾಗತಿಸಿದರು. ತಾಲೂಕ್ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಸುಗುಣ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸವಿತ ಪಿರೇರಾ ವಂದಿಸಿದರು.









