ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವೃದ್ಧ ನಾಪತ್ತೆ

0

ಬೆಳ್ತಂಗಡಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾದ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಕೊಕ್ರಾಡಿ ಎಂಬಲ್ಲಿ ಒಬ್ಬರೇ ವಾಸವಾಗಿದ್ದ ರಾಘು ಶೆಟ್ಟಿ ಯಾನೆ ಅನ್ನೋಜಿ(70) ಎಂಬವರು ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮಂಗಳೂರು ಆಸ್ಪತ್ರೆಯಿಂದ ಔಷದಿ ಇದ್ದು. ಕಳೆದ ಒಂದೂವರೆ ವರ್ಷಗಳಿಂದ ಕೊಕ್ರಾಡಿ ಚಿಕ್ಕಪ್ಪನೊಂದಿಗೆ ವಾಸವಾಗಿದ್ದರು.

ಜ.18 ರಂದು ಸಂಜೆ 3 ಗಂಟೆಗೆ ಯಾರು ಇಲ್ಲದ ವೇಳೆಗೆ ಮನೆಯಿಂದ ಹೊರಹೋದವರು ವಾಪಸ್ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಈತನಕ ಪತ್ತೆಯಾಗದ ಕಾರಣ ವೇಣೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾದ ರಘು ಶೆಟ್ಟಿಯವರ ಮಗ ಹೊಸಂಗಡಿ ಗ್ರಾಮದ ಕುರ್ಲೋಟ್ಟು ನಿವಾಸಿ ಅಶೋಕ್ ಶೆಟ್ಟಿ ಜ.21 ರಂದು ದೂರು ನೀಡಿದ್ದಾರೆ.ನಾಪತ್ತೆಯಾದ ವೃದ್ಧ ರಾಘು ಶೆಟ್ಟಿ ಯಾನೆ ಅನ್ನೋಜಿ ಅವರ ಬಗ್ಗೆ ಮಾಹಿತಿ ಸಿಕ್ಕಿದ್ರೆ ವೇಣೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡಬೇಕಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here