






ಉಜಿರೆ : ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ 77ನೇ ಗಣರಾಜ್ಯೋತ್ಸವ ನಡೆಯಿತು. ಪೂಜ್ಯ ಖಾವಂದರ, ಆಪ್ತ ಸಹಾಯಕ ಕಾರ್ಯದರ್ಶಿಯಾ ಧರ್ಮಸ್ಥಳ ಬೀಡಿನ ವೀರು ಶೆಟ್ಟಿ ಧ್ವಜಾರೋಹಣ ನೆರವೇರಿಸಿ, ಶುಭ ಕೋರಿದರು.



ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಕರಾದ ಲಕ್ಷ್ಮಣ್ ಜಿ. ಡಿ. ಹಾಗೂ ವಸತಿ ನಿಲಯದ ಮುಖ್ಯ ನಿಲಯ ಪಾಲಕರಾದ ವಿಶ್ವನಾಥ್ ಸಹಕರಿಸಿದರು. ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.









