






ಧರ್ಮಸ್ಥಳ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ 2024 ರ ಆರ್ಡಿಸಿ ಕ್ಯಾಂಪ್ ನಲ್ಲಿ ಭಾಗವಹಿಸಿದ್ದ ಉದಿತ್ ಕುಮಾರ್ ಯು.ವಿ. ಆಗಮಿಸಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ವಿಧ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವ,ಗುರಿ ತಲುಪುವ ಹಾದಿಗಳು,ಛಲದ ಮಹತ್ವ,ವಿದ್ಯಾರ್ಥಿ ಜೀವನದ ಸಾಧನೆಯ ಮಾರ್ಗಗಳು ಇತ್ಯಾದಿಗಳಿಂದ ದೇಶ ಸೇವೆಯವರೆಗಿನ ವಿಚಾರಗಳನ್ನು ವಿವಿಧ ಉದಾಹರಣೆಗಳ ಮೂಲಕ ತಿಳಿಸಿಕೊಟ್ಟರು.



ಗಣರಾಜ್ಯೋತ್ಸವದ ಮಹತ್ವ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯ ಭಾವನೆ ಮೂಡಿಸಲು ಮಾಡಬೇಕಾದ ಕೆಲಸಗಳು ಇತ್ಯಾದಿ ವಿಚಾರಗಳನ್ನು ಶಾಲಾ ಸಂಚಾಲಕ ಅನಂತಪದ್ಮನಾಭ ಭಟ್ ಅವರು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ ವಿ ಅವರು ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬಳಿಕ ದೇಶಭಕ್ತಿಯನ್ನು ಬಿಂಬಿಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. ಶಾಲಾ ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.









