ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಉಜಿರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಉಜಿರೆಯಲ್ಲಿ ಜ.26 ರಂದು ಭಾರತದ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಗೀತೆ ಹಾಡಲಾಯಿತು. ನಂತರ 7.45ಕ್ಕೆ ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆಗಳ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಂತಿವನದ ಚೀಫ್ ಮೆಡಿಕಲ್ ಆಫೀಸರ್ ಡಾ. ಶಿವಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಭಾರತದ ಸಂವಿಧಾನದ ಮಹತ್ವದ ಕುರಿತು ವಿವರಿಸಿದರು. ಅವರ ಮಾತುಗಳು ವಿದ್ಯಾರ್ಥಿಗಳಿಗೆ ದೇಶಭಕ್ತಿ ಮತ್ತು ಜವಾಬ್ದಾರಿಯ ಅರಿವನ್ನು ಮೂಡಿಸಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕ ವೃಂದ ಮತ್ತು ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಂಪೂರ್ಣವಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು

LEAVE A REPLY

Please enter your comment!
Please enter your name here