






ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಚರ್ಚ್ನ ಪಾಲನ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ವಿಜಯ್ ಡಿಸೋಜಾ ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ವಂದನೆ ಸಲ್ಲಿಸಿದರು. ನಂತರ ವಿದ್ಯಾರ್ಥಿಗಳು ರಾಷ್ಟ್ರಗೀತೆಯನ್ನು ಗಾಯನ ಮಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿಗೀತೆಗಳು, ಭಾಷಣ, ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಎಲ್ಲರ ಮನಸೆಳೆದರು.

ಮುಖ್ಯ ಅತಿಥಿಗಳು ತಮ್ಮ ಭಾಷಣದಲ್ಲಿ ಭಾರತೀಯ ಸಂವಿಧಾನದ ಮಹತ್ವ ಮತ್ತು ದೇಶದ ಏಕತೆ–ಅಖಂಡತೆಯ ಕುರಿತು ಮಕ್ಕಳಿಗೆ ಸಂದೇಶ ನೀಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲರಾದ ಫಾ.ವಿಜಯ್ ಲೋಬೊ, ಚರ್ಚ್ನ ಪಾಲನ ಮಂಡಳಿಯ ಕಾರ್ಯದರ್ಶಿ ಮರ್ಲಿನ್ ಡಿಸೋಜ ಹಾಗೂ ಸ್ಥಳೀಯ ಪಂಚಾಯಿತಿ ಸದಸ್ ಅನಿಲ್ ಡಿಸೋಜ ಹಾಗೂ ಜಾನೆಟ್ ರೋಡ್ರಿಗಸ್ ಇವರು ಉಪಸ್ಥಿತರಿದ್ದರು.


ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಈ ಗಣರಾಜ್ಯೋತ್ಸವ ಆಚರಣೆ ಎಲ್ಲರಲ್ಲೂ ದೇಶಪ್ರೇಮ ಮತ್ತು ಹೆಮ್ಮೆಯ ಭಾವನೆಯನ್ನು ಮೂಡಿಸಿತು. ಕಾರ್ಯಕ್ರಮವನ್ನು ಜೆಸಿಂತಾ ಇವರು ಸ್ವಾಗತಿಸಿ, ನಳಿನಿ ಹಾಗೂ ಸಿಸ್ಟರ್ ಸಿರಿಶಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.









