







ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಸೀನಪ್ಪ ಗೌಡರ ಅಧ್ಯಕ್ಷತೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲೆಯ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಎಚ್ಆರ್ ಅಜಯ್ ಸರ್ ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಕಾಲೇಜಿನ ಉಪನ್ಯಾಸಕಿಯಾದ ಪೂಜಿತ, ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಶಿಧರ್ ಜಿ ಗುಂಪಕಲ್ಲು ಉಪಸ್ಥಿತರಿದ್ದರು.


ಧ್ವಜಾರೋಹನವನ್ನು ನೆರವೇರಿಸಿ ಮಾತನಾಡಿದ ಅಜಯ್ ಅವರು ಗಣರಾಜ್ಯೋತ್ಸವದ ಮಹತ್ವ ಮತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಹೇಗೆ ಬೆಳೆಯಬೇಕು ಎಂಬುದರ ಬಗ್ಗೆ ತಿಳಿಸಿಕೊಟ್ಟರು. ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ ಅವರು ಅತಿಥಿಗಳನ್ನು ಸ್ವಾಗತಿಸಿ ಗಣರಾಜ್ಯೋತ್ಸವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನು ನುಡಿದರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಗಣರಾಜ್ಯೋತ್ಸವದ ಭಾಷಣವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ, ಹಳೇ ವಿದ್ಯಾರ್ಥಿಗಳಿಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ವತಿಯಿಂದ ಸಿಹಿ ತಿಂಡಿಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಗೆ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.









