ಧರ್ಮಸ್ಥಳ: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

0

ಧರ್ಮಸ್ಥಳ. ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕರು ಪ್ರಸ್ತುತ ಧರ್ಮಸ್ಥಳ ಗಣಪತಿ ದೇವಾಲಯದ ಮೆನೇಜರ್ ಅನಂತರಾಮ ನೂರಿತ್ತಾಯ ಇವರು ಧ್ವಜಾರೋಹಣ ಗೈದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಕಿ ಸೀಮಾ ಎಸ್ ಎಂ ನಿರೂಪಿಸಿದ ಕಾರ್ಯಕ್ರಮಕ್ಕೆ ಶಿಕ್ಷಕಿ ಶ್ರೀಜಾ ಎ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಹಾಗೂ ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here