









ಧರ್ಮಸ್ಥಳ: ಪಾಂಗಾಳ ರಸ್ತೆಯ ಹಿಂದೂ ರುದ್ರಭೂಮಿ ಸಮೀಪದ ತಿರುವಿನಲ್ಲಿರುವ ಮನೆಗೆ ಹಾಡಹಗಲೇ ಕಳ್ಳರು ನುಗ್ಗಿರುವ ಬಗ್ಗೆ ವರದಿಯಾಗಿದೆ. ಧರ್ಮಸ್ಥಳ ಕ್ಷೇತ್ರದ ನೌಕರ ಬಾಲಕೃಷ್ಣ ಎಂಬವರ ಮನೆಗೆ ಕಳ್ಳರು ನುಗ್ಗಿದ್ದು, ಚಿನ್ನಾಭರಣ ಮತ್ತು ಹಣವನ್ನು ದೋಚಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಬೆರಳಚ್ಚುತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸ್ತಿದ್ದಾರೆ









