ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

0

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ, ಹಳೆಕೋಟೆ ವಾಣಿ ಪದವಿ ಪೂರ್ವ ಕಾಲೇಜು, ಇದರ ಸಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಲೋಬೋ ದೀಪ ಬೆಳಗಿಸಿ ಉದ್ಘಾಟಿಸಿದರು. ಹಾಗೂ ಅಧ್ಯಕ್ಷತೆಯನ್ನು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಕೋಶಾಧಿಕಾರಿ ಮಮ್ತಾಜ್ ಬೇಗಂ, ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲೆ ಪ್ರತೀಕ್ಷಾ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here