ಉಜಿರೆ: ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ. ಅವರಿಗೆ “ಆಯುಷ್ ಶ್ರೀ” ಪ್ರಶಸ್ತಿ

0

ಉಜಿರೆ: ಮಂಗಳೂರಿನಲ್ಲಿ ಆಯೋಜಿಸಲಾದ ಆಯುಷ್ ಹಬ್ಬ 2026ರ ಅಂಗವಾಗಿ ನಡೆದ ಆಯುಷ್‌ ಅಭಿನಂದನ ಕಾರ್ಯಕ್ರಮದಲ್ಲಿ ಆಯುಷ್ ವೈದ್ಯ ಪದ್ಧತಿಗಳ ಸಾಧಕರಿಗೆ ಗೌರವ ಸಲ್ಲಿಸಲಾಯಿತು.

ಬೆನಕ ಹೆಲ್ತ್ ಸೆಂಟರ್, ಉಜಿರೆಯ ಸಂಸ್ಥಾಪಕರು ಹಾಗೂ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ್ಣ ಕೆ ಅವರಿಗೆ ಸಮಾಜಕ್ಕೆ ಆಯುಷ್ ವೈದ್ಯ ಪದ್ಧತಿಗಳ ಮೂಲಕ ಗ್ರಾಮೀಣ ಭಾಗದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ “ಆಯುಷ್ ಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಸಮರ್ಪಣೆ, ಸೇವಾಭಾವ ಮತ್ತು ಮಾನವೀಯ ವೈದ್ಯಕೀಯ ದೃಷ್ಟಿಕೋನವನ್ನು ಪ್ರಶಂಸಿಸಲಾಯಿತು. ಈ ವೇಳೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ, ಡಾ.ಮೋಹನ್ ಆಳ್ವ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here