ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ನಡ- ಕನ್ಯಾಡಿ ಗ್ರಾಮಗಳಲ್ಲಿ ಬಿಡುಗಡೆ

0

ನಡ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ. 25ರಿಂದ ಮಾ. 1ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಡ-ಕನ್ಯಾಡಿ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆ ಫೆ.1ರಂದು ನಡ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ದಿವಾಕರ್ ಸಾಲಿಯನ್ ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರೂ ಆದ ನಿತ್ಯಾನಂದ ನಾವರರವರು ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ವೇದಿಕೆಯಲ್ಲಿ ಗುರುನಾರಾಯಣ ಸೇವಾ ಸಂಘ ನಡ -ಕನ್ಯಾಡಿ ಇದರ ಉಪಾಧ್ಯಕ್ಷೆ ವಸಂತಿ ವಸಂತ ಪೂಜಾರಿ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಜಗದೀಶ್ ನಡ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಚಿತ್ರಾವತಿ ಭಂಡಾರಿ ಕೋಡಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಗ್ರಾಮ ಸಮಿತಿ ಅಧ್ಯಕ್ಷ ರಮೇಶ್ ಕೋಟ್ಯಾನ್ ಕುತ್ರೋಟ್ಟು ಹಾಗೂ ಕಾರ್ಯದರ್ಶಿ ಜಯಾನಂದ ಕೂಡೇಲು ಮತ್ತು ಸಮಾರಂಭದಲ್ಲಿ ಉಮೇಶ್ ಪೂಜಾರಿ ಹೊಕ್ಕಿಲ, ಕೃಷ್ಣಪ್ಪ ಪೂಜಾರಿ, ಕಮಲ, ಧನುಷ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ನಡ-ಕನ್ಯಾಡಿ ಶ್ರೀ ಗುರು ನಾರಾಯಣ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಕೆ. ಭಂಡಾರಿ ಕೋಡಿಯವರು ಕಾರ್ಯಕ್ರಮವನ್ನು ಸಂಯೋಜಿಸಿ, ನಿರೂಪಿಸಿದರು.

LEAVE A REPLY

Please enter your comment!
Please enter your name here