ಪುತ್ತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ಕಾರ್ಮಿಕ ಮೃತ್ಯು

0
Electric cables with glowing electricity lightning

ಬೆಳ್ತಂಗಡಿ: ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಅಡಿಕೆ ತೋಟದಲ್ಲಿ ಹಾಳಾಗಿದ್ದ ಬೋರ್ ವೆಲ್ ಸ್ವಚ್ಚಗೊಳಿಸುವ ವೇಳೆ ಬೋರ್ ವೆಲ್ ರಿಂಗ್ ವಾಹನದ ಲಾರಿಯ ಡ್ರಿಲ್ ಮಾಡುವ ಯಂತ್ರ ವಿದ್ಯುತ್ ಲೈನಿಗೆ ತಾಗಿ ಲಾರಿಯ ಬದಿಯಲ್ಲಿದ್ದ ನೀರಿನಲ್ಲಿ ನಿಂತಿದ್ದ ಕಾರ್ಮಿಕ ವಿದ್ಯುತ್ ಆಘಾತಕ್ಕೆ ಈಡಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಛತ್ತೀಸ್ ಗಡ್ ಮೂಲದ ಕಾರ್ಮಿಕ ಶಿವ ಎಕ್ಕ (33) ಮೃತ ಕಾರ್ಮಿಕ. ಘಟನೆ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ.

Electric cables with glowing electricity lightning

ಪುತ್ತಿಲ ನಿವಾಸಿಯಾಗಿರುವ ರಫೀಕ್ ಎಂಬವರು ತಮ್ಮ ತಂದೆಗೆ ಸೇರಿದ ಜಾಗದಲ್ಲಿರುವ ಹಾಳಾದ ಬೋರ್ ವೆಲ್ ರಿಪೇರಿ ಮಾಡಿಸಲು ಫೆ. 3ರಂದು ಹಮೀದ್ ಎಂಬವರಿಗೆ ಸೇರಿದ ಬೋರ್ ವೆಲ್ ರಿಂಗ್ ವಾಹನವನ್ನು ಕರೆಸಿ ರಿಪೇರಿ ಮಾಡಿಸಿದಾಗ ಬೋರ್ ವೆಲ್ ಕೆಲಸ ಮುಗಿಸಿದ ಬಳಿಕ ಲಾರಿಯ ಡ್ರಿಲ್ ಮಾಡುವ ಯಂತ್ರವನ್ನು ಅದರ ಚಾಲಕ ಸಂಪತ್ ಕುಮಾರ್ ಎಂಬವರು ಸರಿಯಾದ ಜಾಗ್ರತೆ ವಹಿಸದೆ ನಿರ್ಲಕ್ಷ್ಯ ತನದಿಂದ ಕೆಳಗೆ ಇಳಿಸಿದ್ದರು. ಈ ವೇಳೆ ಇದು ವಿದ್ಯುತ್ ಲೈನಿಗೆ ತಾಗಿದೆ. ಈ ಸಂದರ್ಭದಲ್ಲಿ ವಾಹನದ ಸಮೀಪ ನೀರಿನಲ್ಲಿ ನಿಂತಿದ್ದ ಕಾರ್ಮಿಕ ಶಿವ ಎಕ್ಕ ವಿದ್ಯುತ್ ಆಘಾತಕ್ಕೆ ಈಡಾಗಿ ಕೆಳಗೆ ಬಿದ್ದಿದ್ದು ಆತನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಆತ ಮೃತಪಟ್ಟಿದ್ದ. ಘಟನೆಯ ಬಗ್ಗೆ ರಫೀಕ್ ಅವರು ನೀಡಿರುವ ದೂರಿನಂತೆ ಪುಂಜಾಲಕಟ್ಟೆ ಠಾಣಾ ಅ.ಕ್ರ 12/2026 ಕಲಂ:106(1),BNS-2023 ಯಂತೆ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here