ಎಲ್.ಸಿ.ಆರ್ ವಿದ್ಯಾಸಂಸ್ಥೆ ಇಲ್ಲಿನ ಪದವಿ ಪೂರ್ವ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ

0

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು, ಇಲ್ಲಿನ ಪದವಿ ಪೂರ್ವ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಿದಾಯ ಸಮಾರಂಭ ಫೆ.5 ರಂದು ಜರುಗಿತು.

ಸಂಸ್ಥೆಯ ಪದವಿ ಪೂರ್ವ ವಿಭಾಗದ ಮುಖ್ಯಸ್ಥರಾದ ಸೌಮ್ಯ ಎನ್. ಅವರು ಮಾತನಾಡಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪಡೆದ ಜ್ಞಾನ, ಶಿಸ್ತು ಮತ್ತು ಮೌಲ್ಯಗಳನ್ನು ಮುಂದಿನ ಜೀವನದಲ್ಲಿ ಅಳವಡಿಸಿಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಶುಭ ಹಾರೈಸಿದರು. ಸಂಸ್ಥೆಯ ಸಂಯೋಜಕರಾದ ಯಶವಂತ ಜಿ. ನಾಯಕ್ ಅವರು ಮಾತನಾಡಿ, ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪರಿಶ್ರಮ ಮತ್ತು ಪ್ರಾಮಾಣಿಕತೆಯನ್ನು ಜೀವನದ ಮೂಲ ಮಂತ್ರವನ್ನಾಗಿ ಮಾಡಿಕೊಂಡರೆ ಗುರಿ ಸಾಧನೆ ಸುಲಭವಾಗುತ್ತದೆ ಎಂದು ಪ್ರೇರಣಾತ್ಮಕ ಮಾತುಗಳನ್ನು ಹೇಳಿದರು.

ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ ಅವರು ಮಾತನಾಡಿ ವಿದ್ಯಾರ್ಥಿಗಳು ಮುಂದಿನ ಶೈಕ್ಷಣಿಕ ಹಾಗೂ ವೃತ್ತಿ ಜೀವನದಲ್ಲಿ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಯಶಸ್ಸನ್ನು ಸಾಧಿಸಬೇಕೆಂದು ಶುಭಾಶಯಗಳನ್ನು ಕೋರಿದರು.

ಕಾರ್ಯಕ್ರಮದ ಅಧ್ಯಕ್ಷೀಯ ಭಾಷಣದಲ್ಲಿ ಮಾನ್ಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಅವರು, ವಿದ್ಯಾರ್ಥಿಗಳು ಕಾಲೇಜಿನೊಂದಿಗೆ ಹೊಂದಿರುವ ಸ್ಮರಣೀಯ ಕ್ಷಣಗಳನ್ನು ಸದಾ ನೆನಪಿನಲ್ಲಿ ಇಟ್ಟುಕೊಂಡು, ಸಮಾಜಕ್ಕೆ ಉಪಯುಕ್ತ ನಾಗರಿಕರಾಗಬೇಕೆಂದು ಹಾರೈಸಿದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ನಿಧಿಶಾ ಸ್ವಾಗತಿಸಿ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಚೈತ್ರಾ ಮತ್ತು ಫಾತಿಮತ್ ಸಿಫಾನ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರತೀಕ್ಷಾ ವಂದಸಿದರು. ಬೋಧಕ ಹಾಗೂ ಬೋಧಕೇತರ ವೃಂದದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here