







ಪುದುವೆಟ್ಟು : ಕ್ಷೇತ್ರ ಗೆಜ್ಜೆಗಿರಿಯಲ್ಲಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ (S N D P) ಪುದುವೆಟ್ಟು ಇಲ್ಲಿ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಪುದುವೆಟ್ಟುವಿನ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.1 ರಂದು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘ ( SNDP) ಪುದುವೆಟ್ಟು ಇಲ್ಲಿ ನಡೆಯಿತು.



ಸಂಘದ ಅಧ್ಯಕ್ಷ ಸುರೇಶ್ ಕೇರಿಯ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರೂ ಆದ ನಿತ್ಯಾನಂದ ನಾವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.
ವೇದಿಕೆಯಲ್ಲಿ ನಾರಾಯಣ ಗುರುಬಿಲ್ಲವ ಸೇವಾ ಸಂಘ ಪುದುವೆಟ್ಟು ಇದರ ಉಪಾಧ್ಯಕ್ಷರಾದ ಅಶೋಕನ್ ಎಂ ಟಿ, ಎಸ್ ಎನ್ ಡಿ ಪಿ ಇದರ ಗೆಜ್ಜೆ ಗಿರಿ ಸಮಿತಿಯ ಅಧ್ಯಕ್ಷರಾದ ಗೋಪಿ ದಾಸ್ ಬಾರಳಿ, ಕಾರ್ಯದರ್ಶಿಯಾದ ಅನುಶ್ರೀ, ಮಾಜಿ ಅಧ್ಯಕ್ಷರಾದ ಸುಕುಮಾರನ್ ಪಿ, ನಾರಾಯಣ ಗುರು ಬಿಲ್ಲವ ಸೇವಾ ಸಂಘ ಪುದುವೆಟ್ಟು ಇದರ ಪ್ರಧಾನ ಕಾರ್ಯದರ್ಶಿ ಬಿಜು ಪೂಜಾರಿ ಉಪಸ್ಥಿತರಿದ್ದರು. ಮಹೇಶ್ ಕೆ ಎಂ, ಮನೋಜ್ ಏರಳಿಕೆ, ಪುಷ್ಪಕರನ್,ಗಿರಿಜಾ ಶಿವನ್, ದಿವಿನೇಶ್, ಕೆ ಪಿ ನಾರಾಯಣ, ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀ ಗುರುನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರೂ, ಶ್ರೀ ಕ್ಷೇತ್ರ ಗೆಜ್ಜೆ ಗಿರಿ ಇದರ ವಲಯ ಸಂಚಾಲಕರಾಗಿರುವ ಸಂತೋಷ್ ಕೆ ಸಿ ಪುದುವೆಟ್ಟು ಕಾರ್ಯಕ್ರಮವನ್ನು ಸಂಯೋಜಿಸಿ ಬಂದ ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.









