ದಿವ್ಯಜ್ಯೋತಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

0

ಕಾಯರ್ತಡ್ಕ : ದಿವ್ಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೆ5.ರಂದು ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು. ವಿಜ್ಞಾನ ದಿನಾಚರಣೆಯ ಅಂಗವಾಗಿ ನಡೆದ ಈ ವಸ್ತು ಪ್ರದರ್ಶನ ಉದ್ಘಾಟನೆಯನ್ನು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬರಂಗಾಯ ಇಲ್ಲಿನ ಶಿಕ್ಷಕರಾದ ರಂಜಿತ್ ನಾಯರ್ ನೆರವೇರಿಸಿದರು. ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಂಡು ಸದೃಢ ಭಾರತದ ನಿರ್ಮಾಣಕ್ಕೆ ಕೈಜೋಡಿಸಬೇಕು. ವಿದ್ಯಾರ್ಥಿಗಳು ಮೌಢ್ಯತೆಯಿಂದ ದೂರ ಇದ್ದು ಜ್ಞಾನವನ್ನು ಬೆಳೆಸಿಕೊಳ್ಳಬೇಕೆಂದು ಕರೆಕೊಟ್ಟರು. ಅಲ್ಲದೆ ವಿದ್ಯಾರ್ಥಿಗಳ ಕೌಶಲ್ಯವನ್ನು ಮೆಚ್ಚಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಲಿಸ್ನಾ ಮ್ಯಾಥ್ಯೂ ಹಾಗೂ ವಿಜ್ಞಾನ ಶಿಕ್ಷಕಿ ಪವಿತ್ರ ಇವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತಾವೇ ಸ್ವತ: ತಯಾರಿಸಿದ ವಿಜ್ಞಾನ ಮಾದರಿಗಳೊಂದಿಗೆ , ಅದರ ವಿಶಿಷ್ಟತೆಯನ್ನು ವಿವರಿಸಿದರು. ಆರನೇ ತರಗತಿಯಿಂದ ಹತ್ತನೇ ತರಗತಿಯ ವರೆಗಿನ ಮಕ್ಕಳು ಇದರಲ್ಲಿ ಪಾಲ್ಗೊಂಡಿದ್ದು ಹಲವು ವಿಶಿಷ್ಟ ರೀತಿಯ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಕಿ ಪವಿತ್ರ ಇವರು ಮಾರ್ಗದರ್ಶನ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು,ಶಿಕ್ಷಕ ವೃಂದ,ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ನಾಯಕಿ ಕುಮಾರಿ ವೃಷ್ಟಿ ಅವರು ನಿರೂಪಿಸಿ, ಕುಮಾರಿ ಅನುಷಾ ಅವರು ವಂದಿಸಿದರು.

LEAVE A REPLY

Please enter your comment!
Please enter your name here