ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಪಡಂಗಡಿ: ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ. 9 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಪ್ರಸಾದ್ ಗ್ರಾಮ ಸಭೆಯನ್ನು ಮುನ್ನಡೆಸಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ವಸಂತಿ, ಪಂಚಾಯತ್ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ಅನುಪಾಲನಾ ವರದಿ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳಾದ ಸುನಿಲ್ ಮತ್ತು ದಿವ್ಯ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆ ಗಳ ವಿವರ ನೀಡಿದರು.ಇಲಾಖೆಯ ಅಧಿಕಾರಿಗಳು ವಿವಿಧ ಇಲಾಖಾ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here