ಕೊಕ್ಕಡ: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕೊಕ್ಕಡ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕೊಕ್ಕಡ ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ. 09 ರಂದು ಸೋಮವಾರ ಕೊಕ್ಕಡದಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕಿನ ಗೌರವ ಸಲಹೆಗಾರರೂ, ಶ್ರೀ ಮಹಾಗಣಪತಿ ದೇವಸ್ಥಾನ ಸೌತಡ್ಕ ಇಲ್ಲಿಯ ಆಡಳಿತ ಸಮಿತಿಯ ಸದಸ್ಯರೂ, ಉಜಿರೆ ಮೂರ್ತೆದಾರರ ಸಂಘದ ಅಧ್ಯಕ್ಷರೂ ಆಗಿರುವ ವಿಶ್ವನಾಥ್ ಕೊಲ್ಲಾಜೆ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರೂ ಆದ ನಿತ್ಯಾನಂದ ನಾವರ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಧರ್ಮಸ್ಥಳ ಜಿಲ್ಲಾ ಪಂಚಾಯತ್ ಸಂಚಾಲಕರಾಗಿರುವ ರೂಪೇಶ್ ಕೆ ಧರ್ಮಸ್ಥಳ, ಪುದುವೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷರೂ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಲಯ ಸಂಚಾಲಕರೂ ಆಗಿರುವ ಪೂರ್ಣಕ್ಷ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಕೊಕ್ಕಡ ಗ್ರಾಮ ಸಮಿತಿ ಅಧ್ಯಕ್ಷರಾದ ಸುಂದರ ಪೂಜಾರಿ ಕೆ ಜೆ, ಕಾರ್ಯದರ್ಶಿಯಾದ ತಿಮ್ಮಪ್ಪ ಪೂಜಾರಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿಶ್ವನಾಥ್ ಕೊಲ್ಲಾಜೆ ಸಂಯೋಜಿಸಿದ್ದರು.

LEAVE A REPLY

Please enter your comment!
Please enter your name here