ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಬೆಳ್ತಂಗಡಿ:ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬಡಗಕಾರಂದೂರು ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.11 ರಂದು ಬುಧವಾರ ನೀರಲ್ಕೆ ವಸಂತ ಪೂಜಾರಿಯವರ ಮನೆಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿಯವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶ್ರೀ ಕ್ಷೇತ್ರ ನಡೆದು ಬಂದ ಹಾದಿಯನ್ನು ವಿವರಿಸಿ ಜಾತ್ರೋತ್ಸವವನ್ನು ಯಶಸ್ಸು ಗಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಅಗಲಿರುವ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರೂ ಆದ ನಿತ್ಯಾನಂದ ನಾವರ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಳದಂಗಡಿ ಜಾತ್ರೋತ್ಸವ ಸಮಿತಿಯ ವಲಯ ಸಂಚಾಲಕರುಗಳಾದ ವಿಶ್ವನಾಥ ಪೂಜಾರಿ ಕುದ್ಯಾಡಿ ಗುತ್ತು, ಉಮೇಶ್ ಸುವರ್ಣ ಶಿರ್ಲಾಲು, ಅಳದಂಗಡಿ ವಿಶ್ವ ಹಿಂದು ಪರಿಷತ್ತಿನ ಅಧ್ಯಕ್ಷ ವಸಂತ ಪೂಜಾರಿ ನೀರಲ್ಕೆ, ಗೆಜ್ಜೆಗಿರಿ ಬಡಗಕಾರಂದೂರು ಗ್ರಾಮ ಸಮಿತಿಯ ಅಧ್ಯಕ್ಷರೂ, ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರೂ ಆಗಿರುವ ಧರ್ಣಪ್ಪ ಪೂಜಾರಿ ದೋರಿಂಜ, ಕಾರ್ಯದರ್ಶಿ ಆನಂದ ಪೂಜಾರಿ ನೀರಲ್ಕೆ, ಮಹಿಳಾ ಸಮಿತಿಯ ಅಧ್ಯಕ್ಷ ವನಿತಾ ರಾಜೇಂದ್ರ ಉಂಗಿಲ ಬೈಲು, ಕಾರ್ಯದರ್ಶಿ ರಕ್ಷಾ ಅಭಿಷೇಕ್ ಪೂಜಾರಿ ನೀರಲ್ಕೆ, ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾದ ಸುಮಲತಾ ಪೂಜಾರಿ ನೀರಲ್ಕೆ, ವಾಸು ಪೂಜಾರಿ, ಸರಸ್ವತಿ, ಸತ್ಯವತಿ, ಯಶೋಧರ ಪೂಜಾರಿ ಬಿಕ್ಕಿರ, ಅಭಿಷೇಕ್ ಪೂಜಾರಿ ನೀರಲ್ಕೆ, ನಳಿನಿ, ರಾಜವತಿ, ಚೇತನ ಸಂದೀಪ್, ವಿಜಯ, ಸುಜಾತ, ಸುಂದರಿ, ಕುಸುಮಾವತಿ,ಜಿನ್ನಪ್ಪ ಪೂಜಾರಿ, ವಿಕೇಶ್, ಶರತ್, ಜಯ ಪೂಜಾರಿ, ಚಂಪಾ ದಯಾನಂದ, ಸುಧಾ ಹಾಗೂ ಬಡಗಕಾರಂದೂರು ಗ್ರಾಮದ ಹಲವಾರು ಗಣ್ಯರು ಉಪಸ್ಥಿತರಿದ್ದರು. ಅಳದಂಗಡಿ ವಲಯ ಸಂಚಾಲಕ ಕೊರಗಪ್ಪ ಪೂಜಾರಿ ನೀರಲ್ಕೆಯವರು ಕಾರ್ಯಕ್ರಮವನ್ನು ಸಂಯೋಜಿಸಿ ನಿರೂಪಿಸಿದರು, ವಸಂತ ಪೂಜಾರಿ ನೀರಲ್ಕೆ ಯವರು ಬಂದ ಅತಿಥಿಗಳಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಿದ್ದರು.

LEAVE A REPLY

Please enter your comment!
Please enter your name here