






ಬೆಳ್ತಂಗಡಿ: ಕಣಿಯೂರು ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾರ್ಚ್ 1 ರಿಂದ 6 ರವರಿಗೆ ನಡೆಯಲಿದ್ದು ಅದರ ಪೂರ್ವ ಸಿದ್ಧತೆ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಫೆ.14 ರಂದು ಪದ್ಮುಂಜ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಿತು.



ಬಳಿಕ ಮಾತನಾಡಿದ ಶಾಸಕ ಹರೀಶ್ ಪೂಂಜ ಮಲೆಂಗಲ್ಲು ಉಮಾಮಹೇಶ್ವರ ಬ್ರಹ್ಮಕಲಶೋತ್ಸವಕ್ಕೆ ಕೇವಲ 14 ದಿನ ಮಾತ್ರ ಇದೆ. ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಬೇಕಾದರೆ ಎಲ್ಲಾರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ವಿಠ್ಠಲ ಶೆಟ್ಟಿ ಕೊಲ್ಲೊಟ್ಟು, ಆಡಳಿತ ಮಂಡಳಿ ಕೋಶಾಧಿಕಾರಿ ರಕ್ಷಿತ್ ಪಣಿಕ್ಕರ, ಕಣಿಯೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸೀತಾರಾಮ ಮಡಿವಾಳ, ದೇವಸ್ಥಾನದ ಆಡಳಿತ ಮೊಕ್ತೇಸರ ಚಿದಾನಂದ ರಾವ್ ಕೊಲ್ಲಾಜೆ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ, ಕಾರ್ಯದರ್ಶಿ ಜಿತೇಶ್ ಜೈನ್, ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಪ್ರಫುಲ್ಲಚಂದ್ರ ಅಡ್ಯಂತಾಯ, ಬ್ರಹ್ಮಕಲಶೋತ್ಸವ ಸಮಿತಿಯ ಗೌರವ ಸಲಹೆಗಾರ ಯೋಗೀಶ್ ಕುಮಾರ್ ಕಡ್ತಿಲ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಹರ್ಷ ಮೇಲಾಂಟ, ಕಾರ್ಯಾಧ್ಯಕ್ಷ ನಾರಾಯಣ ಗೌಡ, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಕಾರ್ಯದರ್ಶಿ ರಘುಪತಿ ಭಟ್, ಕೋಶಾಧಿಕಾರಿ ಉದಯ್ ಕುಮಾರ್ ಮೇಲಾಂಟ ಹಾಗೂ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಸಭೆಯಲ್ಲಿ ಹೊರಕಾಣಿಕೆ ಮೆರವಣಿಗೆ, ನಗರ ಅಲಂಕಾರ, ಅನ್ನದಾನ ವ್ಯವಸ್ಥೆ, ಆಹಾರ ವಿತರಣೆ ಹಾಗೂ ಪಾರ್ಕಿಂಗ್ ವ್ಯವಸ್ಥೆಯ ಬಗ್ಗೆ ಪೂರ್ವ ಸಿದ್ಧತೆ ಸಭೆಯಲ್ಲಿ ಚರ್ಚಿಸಲಾಯಿತು.










