







ಹೊಕ್ಕಾಡಿಗೋಳಿ ಸ.ಹಿ. ಪ್ರಾ.ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ ಫೆ. 14ರಂದು ನಡೆಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ದಿನೇಶ್ ಹುಲಿಮೇರು ಅಧ್ಯಕ್ಷತೆಯಲ್ಲಿ ಮೆಟ್ರಿಕ್ ಮೇಳದ ಉದ್ಘಾಟನೆಯನ್ನು ಉದ್ಯಮಿ ರಕ್ಷಣ್ ಮೆಲಾಂಟ ಶ್ರೀ ಕೃಷ್ಣ ಕ್ರಷರ್ 12 ಕವಲು ಇವರು ನೆರವೇರಿಸಿ ಶುಭ ಹಾರೈಸಿದರು.



ಆರಂಬೋಡಿ ಗ್ರಾಮ ಪಂಚಾಯತ್ ಪಿಡಿಓ ಗಣೇಶ್ ಶೆಟ್ಟಿ ಮಾತನಾಡಿ ಮೆಟ್ರಿಕ್ ಮೇಳವು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಉತ್ತೇಜಿಸುವುದರ ಜೊತೆಗೆ ವ್ಯವಹಾರ ಜ್ಞಾನವನ್ನು ಮೂಡಿಸುವ ಅದ್ಭುತ ಚಟುವಟಿಕೆ ಹಾಗೂ ಈ ಮೇಳದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವು ಬೆಳೆಯುತ್ತದೆ ಎಂದರು . ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್, ಶಶಿಧರ್ ಕಲ್ಲಾಪು, ಕಿರಣ್ ಮಂಜಿಲ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಎಸ್ ಡಿ ಎಂ ಸಿ ಸದಸ್ಯರು, ತಾಯಂದಿರ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರಿನವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ವ್ಯಾಪಾರ ಮಾಡಿ ಪ್ರೋತ್ಸಾಹಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಸುಮಿತ್ರ ಎಸ್. ಸ್ವಾಗತಿಸಿ, ಶಿಕ್ಷಕಿಯರಾದ ಸುಚಿತ್ರ, ಮೆಟಿಲ್ಡ ಡಿಸೋಜ, ಸಿಲ್ವಿಯಾ ಮಿರಾಂದ, ಶುಭವತಿ, ಸುತೀಕ್ಷಾ, ಪ್ರಮೀಕ್ಷಾ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.









