ಗುರುವಾಯನಕೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಗುರುವಾಯನಕೆರೆ: ಫಾದರ್ ಎಲ್. ಎಮ್ ಪಿಂಟೋ ಆಸ್ಪತ್ರೆ ಬದ್ಯಾರ್, ಹಿರಿಯ ವಿದ್ಯಾರ್ಥಿಗಳ ಸಂಘ ಹಾಗೂ ಶಾಲಾ ಅಭಿವೃದ್ಧಿ ಸಮಿತಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಮತ್ತು ಗ್ರಾಮ ಪಂಚಾಯತ್ ಕುವೆಟ್ಟು ಇದರ ಸಂಯುಕ್ತ ಆಶ್ರಯದಲ್ಲಿ ಫೆ.15ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಗುರುವಾಯನಕೆರೆಯ ದ.ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಈ ಶಿಬಿರದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆಯಲ್ಲಿ 25ಕ್ಕೂ ಹೆಚ್ಚಿನ ಮಂದಿಗೆ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಮಾಡಲಾಯಿತು. 40ಕ್ಕೂ ಹೆಚ್ಚಿನ ಮಂದಿಗೆ ಇ.ಸಿ.ಜಿ ಮಾಡಲಾಯಿತು. ಉಚಿತ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ನಡೆದಿದ್ದು. ಶಿಬಿರದಿಂದ ಒಟ್ಟು 125 ಕ್ಕೂ ಹೆಚ್ಚಿನ ಮಂದಿ ಪ್ರಯೋಜನ ಪಡೆದುಕೊಂಡರು. .

LEAVE A REPLY

Please enter your comment!
Please enter your name here