ಫೆ.20-22 ಕಾರಿಂಜ ವನಶಾಸ್ತಾರ ಮತ್ತು ವೀರಭದ್ರ ಸ್ವಾಮಿ ದೇವಸ್ಥಾನ ಬ್ರಹ್ಮಕಲಶೋತ್ಸವ; ಶಾಸಕ ಹರೀಶ್ ಪೂಂಜ ರಿಂದ ಪತ್ರಿಕಾಗೋಷ್ಠಿ

0

ಬೆಳ್ತಂಗಡಿ: ಅತ್ಯಂತ ಪುರಾತನ ಇತಿಹಾಸವಿರುವ ವನಶಾಸ್ತಾರ ಮತ್ತು ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಫೆ.17 ರಂದು ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಕಾರಿಂಜ ವನಶಾಸ್ತಾರ ಮತ್ತು ವೀರಭದ್ರ ಸ್ವಾಮಿ ದೇವಸ್ಥಾನ ಬ್ರಹ್ಮಕಲಶೋತ್ಸವ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ವೇಣೂರು ವೇದಮೂರ್ತಿ ಶ್ರೀ ಕೆ.ಲಕ್ಷ್ಮೀನಾರಾಯಣ ಕಾರಂತ ಇವರ ನೇತೃತ್ವದಲ್ಲಿ ಫೆ.20 ರಿಂದ 22 ವರೆಗೆ ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದೆ.

ಫೆ.20 ರಂದು ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ನಂತರ ಕಾರ್ಯಾಲಯ ಉದ್ಘಾಟನೆ ನಡೆಯಲಿದೆ. ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.ಸಂಜೆ 4.30 ರಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.ರಾತ್ರಿ 7 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಹರೀಶ್ ಆರಿಕೊಡಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಅತುಲ್ ಕುಮಾರ್ ಕೆ.ಎನ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ 9 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಫೆ.21 ರಂದು ಬೆಳಿಗ್ಗೆ 8 ರಿಂದ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. ನಂತರ ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.ಹಾಗೂ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.ಫೆ.22 ರಂದು ಬೆಳಿಗ್ಗೆ 8 ರಿಂದ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. ನಂತರ ವಿವಿಧ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಸಂಸದ ಬ್ರಿಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಅಧ್ಯಕ್ಷತೆ ವಹಿಸಲಿದ್ದಾರೆ.ಹಾಗೂ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಕುಮಾರ್ ಕಡ್ತಿಲ, ಕಾರ್ಯಾಧ್ಯಕ್ಷ ಸುನಿಲ್ ಅಣವು, ಟ್ರಸ್ಟ್ ಸಮಿತಿಯ ಅಧ್ಯಕ್ಷ ಕೊರಗಪ್ಪ ಪೂಜಾರಿ ಕಾರಿಂಜ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ, ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ವಿಜಯ್ ಕುಮಾರ್ ಕಲ್ಲಳಿಕೆ, ಹೊರಕಾಣಿಕೆ ಸಮಿತಿಯ ಸಂಚಾಲಕ ಪ್ರಭಾಕರ ಪೊಸಂದೋಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here