






ಉಜಿರೆ, ದಿ.ಫೆ.18 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ ಸಿ ವಿದ್ಯಾರ್ಥಿ ಚನ್ನ ಕೇಶವ ಇದೇ ಬರುವ ಫೆಬ್ರವರಿ 20 ರಂದು ಹರಿಯಾಣದಲ್ಲಿ ನಡೆಯಲಿರುವ ಅಖಿಲಾ ಭಾರತ ಅಂತರ್ ವಿಶ್ವವಿದ್ಯಾಲಯಗಳ ಕ್ರಾಸ್ ಕಂಟ್ರಿ ಚಾಂಪಿಯನ್ಶಿಪ್ ಆಯ್ಕೆಗೊಂಡು ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಈ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿದಿಸಲಿದ್ದಾರೆ.



ಇವರಿಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ ಪೂಂಜ ತರಬೇತಿ ನಿಡಿರುತ್ತಾರೆ.ಬಳ್ಳಾರಿಯ ಸಂಡೂರು ತಾಲೂಕಿನ ಲಿಂಗ ರೆಡ್ಡಿ ಜಿಎಸ್ ಮತ್ತು ಉಮಾದೇವಿ ಜಿ ದಂಪತಿಗಳ ಪುತ್ರ ಈ ಹಿಂದೆ ಒಡಿಸ್ಸಾದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಟ್ರ್ಯಾಕ್ ಇವೆಂಟ್ ಪಾಲ್ಗೊಂಡಿದ್ದರು. ಇತ್ತೀಚೆಗೆ ಕರ್ನಾಟಕ ಸರ್ಕಾರ ಆಯೋಜನೆಯ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 3ಕಿಲೋ ಮೀಟರ್ ಸ್ಟೀಪ್ ಲೀಚಸ್ ನಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಇವರ ಈ ಸಾಧನೆಗೆ ಎಸ್.ಡಿ.ಎಂ ಸಂಸ್ಥೆಯ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಎಸ್.ಡಿ.ಎಂ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ದೈಹಿಕ ಶಿಕ್ಷಣ ಉಪನ್ಯಾಸಕ ಸುದೀನ್ ಪುಜಾರಿ, ಸಂದೇಶ್ ಬಿ. ಪೂಂಜ ಅಭಿನಂದಿಸಿದರು.









