ಸಂಚಾರಿ ಸ್ಟುಡಿಯೋ ಯೂ ಟ್ಯೂಬರ್ ಸಂತೋಷ್ ಕಡಬಗೆ ಜೈಲು ಶಿಕ್ಷೆ: ಬೆಂಗಳೂರು ಪೊಲೀಸರಿಂದ ಬಂಧನ

0

ಬೆಳ್ತಂಗಡಿ: ಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂ ಟ್ಯೂಬರ್ ಸಂತೋಷ್ ಕಡಬ ಎಂಬವರನ್ನು ಬಂಧಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಪದೇ ಪದೇ ಸಂಚಾರಿ ಸ್ಟುಡಿಯೋ ಯೂವಟ್ಯೂಬ್ ಮೂಲಕ ಸಂತೋಷ್ ಕಡಬ ಅವರು ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಪ್ರಸಾರ ಮಾಡಿದ ಪ್ರಕರಣ ಸಂಬಂಧ ನ್ಯಾಯಾಲಯದಿಂದ ನೋಟೀಸ್ ಜಾರಿಯಾಗಿದ್ದರೂ ಮತ್ತೆ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಕೋರ್ಟ್ ಸಿಬ್ಬಂದಿ ಜೊತೆಯಲ್ಲಿ ಬೆಂಗಳೂರು ಪೊಲೀಸರು ಫೆ‌.18ರಂದು ಕಡಬಕ್ಕೆ ಆಗಮಿಸಿ ಸಂತೋಷ್ ಅವರನ್ನು ಅವರ ಸ್ಟುಡಿಯೋದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಜೆ ವೇಳೆಗೆ ಬೆಂಗಳೂರು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿ ಜೈಲಿಗೆ ಕಳುಹಿಸಲಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಕೀಲ ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here