







ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ಕೊಕ್ಕಡ ಇದರ ನಿಕಟಪೂರ್ವ ಸದಸ್ಯರು ಕಳೆದ ಐದು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ. ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹102 ಕೋಟಿ ಅನುದಾನ ಒದಗಿಸಿರುವುದಕ್ಕೆ ಕೃತಜ್ಞತಾ ಅಭಿನಂದನೆಯನ್ನು ಶಾಸಕರ ಗೃಹಕಚೇರಿಯಲ್ಲಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮದ ಮುಂದಿನ ಹಂತದ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಮಗ್ರ ಚರ್ಚೆ ನಡೆಯಿತು.

ಶಾಸಕರು ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಅಗತ್ಯ ಮಾರ್ಗದರ್ಶನ ನೀಡಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಯೋಗೀಶ್ ಆಳಂಬಿಲ, ಬೇಬಿ, ನಿಕಟಪೂರ್ವ ಉಪಾಧ್ಯಕ್ಷರಾದ ಪವಿತ್ರ, ಕೆ. ಪ್ರಭಾಕರ ಗೌಡ,ನಿಕಟಪೂರ್ವ ಸದಸ್ಯರಾದ ವಿಶ್ವನಾಥ್ ಕಕ್ಕುದೊಲಿ, ಜಗದೀಶ್ ಕೆಂಪಕೋಡಿ, ಲತಾ, ಮಾಜಿ ಸದಸ್ಯೆ ಲಕ್ಷ್ಮೀ ಅಡೈ ಉಪಸ್ಥಿತರಿದ್ದರು.


ಇದಲ್ಲದೆ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ, ಎಸ್.ಟಿ. ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ, ಬೂತ್ ಅಧ್ಯಕ್ಷ ಕಿರಣ್ ಬಾಲ್ತಿಮಾರ್, ಕಾರ್ಯದರ್ಶಿ ರವಿಚಂದ್ರ ಪುಡಿಕೇತ್ತುರ್ ಹಾಗೂ ಹಲವಾರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಗ್ರಾಮಾಭಿವೃದ್ಧಿಯ ದಿಶೆಯಲ್ಲಿ ಮುಂದಿನ ದಿನಗಳಲ್ಲಿಯೂ ಸಮಗ್ರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುವ ಸಂಕಲ್ಪ ವ್ಯಕ್ತವಾಯಿತು.ಈ ಸಂಧರ್ಭದಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡಿ 5ವರ್ಷದ ಅವಧಿಯಲ್ಲಿ ಸದಸ್ಯರೆಲ್ಲರೂ ಜನಪರವಾಗಿ ಉತ್ತಮವಾಗಿ ಆಡಳಿತ ನೀಡಿದ್ದು ಅನುದಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿದ ಪಂಚಾಯತ್ ಸದಸ್ಯರೆಲ್ಲರಿಗೂ ಅಭಿನಂದನೆ ಸಲ್ಲಿಸುತ್ತಿರುವುದಾಗಿ ತಿಳಿಸಿದರು.









