ಬಂದಾರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬಂದಾರು ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.15 ರಂದುಆದಿತ್ಯವಾರ ಮುರ್ತಜೆ ರುಕ್ಮಯ್ಯ ಪೂಜಾರಿ ಅವರ ಮನೆಯಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಬಂದಾರು ಇಲ್ಲಿನ ಮಾಜಿ ಉಪಾಧ್ಯಕ್ಷರಾದ ರುಕ್ಮಯ್ಯ ಪೂಜಾರಿ ಮುರ್ತಾಜೆ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಡಳಿತ ಸಮಿತಿ ಸದಸ್ಯರೂ,ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ಶ್ರೀ ನಿತ್ಯಾನಂದ ನಾವರ ರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಕ್ಷೇತ್ರ ನಡೆದು ಬಂದ ಹಾದಿಯನ್ನು ವಿವರಿಸಿ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ಗ್ರಾಮದ ಭಕ್ತಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯಿತ್ ಸದಸ್ಯರೂ, ಗೆಜ್ಜೆಗಿರಿ ಗ್ರಾಮ ಸಮಿತಿ ಅಧ್ಯಕ್ಷರೂ ಆಗಿರುವ ಸುಚಿತ್ರ ಪೂಜಾರಿ ಮುರ್ತಜೆ ಹಾಗೂ ಕಾರ್ಯದರ್ಶಿ ಸಂತೋಷ ಪೂಜಾರಿ ಮುರ್ತಾಜೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀಧರ ಪೂಜಾರಿ ಮುರ್ತಾಜೆ,ಸೇಸಪ್ಪ ಪೂಜಾರಿ, ನಿತ್ಯಾನಂದ ಪೂಜಾರಿ ಜಯಾನಂದ ಪೂಜಾರಿ, ಶ್ವೇತಾ ಪುಷ್ಪಾ, ಶರತ್,ಅಕ್ಷತಾ, ಸದಾನಂದ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಗೆಜ್ಜೆಗಿರಿ ಜಾತ್ರೋತ್ಸವ ಸಮಿತಿಯ ವಲಯ ಸಂಚಾಲಕರಾಗಿರುವ ಸುಚಿತ್ರ ವಿಶ್ವನಾಥ್ ಕೊಲ್ಲಾಜೆ ಯವರು ಸಂಯೋಜಿಸಿದ್ದರು.

LEAVE A REPLY

Please enter your comment!
Please enter your name here