







ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಾವರ ಗ್ರಾಮದ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ 19 ರಂದು ಇರಂತೊಟ್ಟು ಗುತ್ತು ರತ್ನಾಕರ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಅವರ ಮನೆಯಲ್ಲಿ ನಡೆಯಿತು.

ಶ್ರೀ ಗುರು ನಾರಾಯಣ ಸೇವಾ ಸಂಘ ಬೆಳ್ತಂಗಡಿ ಇಲ್ಲಿನ ಮಾಜಿ ನಿರ್ದೇಶಕರೂ, ಕೋಟಿ ಚೆನ್ನಯ್ಯ ಗರಡಿ ಕುದ್ಯಾಡಿ ಇಲ್ಲಿನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುವ ವಿಶ್ವನಾಥ ಪೂಜಾರಿ ಕುದ್ಯಾಡಿ ಗುತ್ತು ರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಜಾತ್ರೋತ್ಸವಕ್ಕೆ ಶುಭ ಹಾರೈಸಿದರು.


ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿ ಸದಸ್ಯರೂ,ಜಾತ್ರೋತ್ಸವ ಸಮಿತಿಯ ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕರಾದ ನಿತ್ಯಾನಂದ ನಾವರ ಪ್ರಸ್ತಾವಿಕವಾಗಿ ಮಾತನಾಡುತ್ತಾ ಕ್ಷೇತ್ರ ನಡೆದು ಬಂದ ಹಾದಿಯನ್ನು ವಿವರಿಸಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ಗ್ರಾಮದ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ನಾವರ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಯಾನಂದ ಪೂಜಾರಿ ಕೊರಲ್ಲ, ಜಾತ್ರೋತ್ಸವಸಮಿತಿ ಯ ಅಳದಂಗಡಿ ವಲಯದ ಸಂಚಾಲಕರಾದ ಕೊರಗಪ್ಪ ಪೂಜಾರಿ ನೀರಲ್ಕೆ, ಗೆಜ್ಜೆಗಿರಿ ಗ್ರಾಮ ಸಮಿತಿಯ ಕಾರ್ಯದರ್ಶಿಯೂ, ಗ್ರಾಮ ಪಂಚಾಯತ್ ಸದಸ್ಯರೂ ಆಗಿರುವ ರವಿ ಪೂಜಾರಿ ಹಾರಡ್ಡೆ, ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘ ಸುಳ್ಕೇರಿ ಇಲ್ಲಿನ ಅಧ್ಯಕ್ಷರಾದ ಪುಷ್ಪಾವತಿ ಎನ್ ನಾವರ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಕೇಶವತಿ ರಮೇಶ್ ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಸುಕೇಶ್ ಪೂಜಾರಿ, ರಾಕೇಶ್, ಭಾರತಿ, ವಸಂತಿ, ಕವಿತಾ, ಜಯಂತಿ, ಸುದರ್ಶನ್, ದಯಾನಂದ ಉಪಸ್ಥಿತರಿದ್ದರು. ಸರಕಾರಿ ಪ್ರೌಢಶಾಲೆ ಅಳದಂಗಡಿ ಇಲ್ಲಿನ ದೈಹಿಕ ಶಿಕ್ಷಕರಾದ ಶೇಖರ ಎನ್ ಅಲೆಕ್ಕಿ ಯವರು ಕಾರ್ಯಕ್ರಮವನ್ನು ಬಂದ ಅತಿಥಿಗಳನ್ನು ಸ್ವಾಗತಿಸಿ ನಿರೂಪಿಸಿದರು









