ಮುಂಡಾಜೆ ಮಹಿಳಾ ಸಂಜೀವಿನಿ ಒಕ್ಕೂಟ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿ ಕಾರ್ಯಕ್ರಮ

0

ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ನೇತ್ರಾವತಿ ಮಹಿಳಾ ಸಂಜೀವಿನಿ ಒಕ್ಕೂಟ ಮುಂಡಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ರೈತ ತರಬೇತಿಯು ಮುಂಡಾಜೆ ಗ್ರಾಮ ಪಂಚಾಯತ್ ಪ್ರಾಂಗಣದಲ್ಲಿ ನಡೆಯಿತು.

ಬಂದ ಅತಿಥಿಗಳನ್ನು ಹಾಗೂ ರೈತರನ್ನು ಎಲ್ ಸಿ ಆರ್ ಪಿ ಪುಷ್ಪಾವತಿ ಸ್ವಾಗತ ಮಾಡಿದರು ಒಕ್ಕೂಟದ ಅಧ್ಯಕ್ಷ ಭವಾನಿ ಶೆಟ್ಟಿ ಹಾಗೂ ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಉಜಿರೆ ಗ್ರಾಮದ ಕೃಷಿ ಸಖಿ ಪ್ರಾಸ್ತಾವಿಕವಾಗಿ ಮಾತಾಡಿ ರೈತ ತರಬೇತಿಯ ಉದ್ದೇಶಗಳು ವೈಜ್ಞಾನಿಕವಾಗಿ ಕೃಷಿ ಮಾಡುವ ವಿಧಾನ ಕೃಷಿ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಮಾಹಿತಿ ನೀಡಿದರು. ತರಬೇತಿ ಕೇಂದ್ರದ ADA ಮಾತಾಡಿ ರೈತರು ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾದ ಸುಲೈಮಾನ್ ಬೆಳಾಲು ಇವರು ಅಣಬೆ ಕೃಷಿ ತರಬೇತಿಯನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು. ಸಂಪನ್ಮೂಲ ವ್ಯಕ್ತಿಗಳಾದ ನಾಗೇಶ್ ಇವರು ತೋಟಗಾರಿಕಾ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಹಾಗೂ ಮಣ್ಣು ಮಾದರಿಯ ಮಹತ್ವ ತಿಳಿಸಿದರು ಸಭೆಯಲ್ಲಿ ಐವತ್ತಕ್ಕೂ ಹೆಚ್ಚುರೈತರು ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಪದಾಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು ಕೊನೆಗೆ ಎಂಬಿಕೆ ಮೀನಾ ಧನ್ಯವಾದ ನೀಡಿದರು.

LEAVE A REPLY

Please enter your comment!
Please enter your name here