ಮದ್ದಡ್ಕ: ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕುವೆಟ್ಟು; ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಕೆಲಸ ಕಾರ್ಯನಡೆಯುತ್ತಿದ್ದು ಮಾ 12 ರoದು ನಡೆಯಲಿರುವ ದೈವಗಳ ಪ್ರತಿಷ್ಠಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾ 2 ರoದು ದೈವಸ್ಥಾನದ ವಠಾರದಲ್ಲಿ ಜರಗಿತು.

ಹಿರಿಯರು ನಿವೃತ್ತ ಬ್ಯಾಂಕ್ ಮ್ಯಾನೇಜರ್ ಗೋವಿಂದ ಭಟ್ ಆಮoತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷೆ ಸುಜಿತಾ ವಿ ಬಂಗೇರ, ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು, ದೇವಸ್ಥಾನದ ಟ್ರಸ್ಟಿನ ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಗೋಪಾಲ ಶೆಟ್ಟಿ ಕೊರ್ಯಾರು, ದೈವಸ್ಥಾನದ ಸೇವಾ ಟ್ರಸ್ಟ್ ನ ಸದಸ್ಯರು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಸದಸ್ಯರು ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here