






ಬೆಳ್ತಂಗಡಿ : ಕರ್ನಾಟಕ ಸರ್ಕಾರದ ಜನಪ್ರಿಯ ಮುಖ್ಯಮಂತ್ರಿ ಮಾನ್ಯ ಸಿದ್ದರಾಮಯ್ಯಜಿ ಮಂಡಿಸಿರುವ ದಾಖಲೆಯ ಐತಿಹಾಸಿಕ ಬಜೆಟ್ ಜನಪರ ಹಾಗೂ ಅಭಿವೃದ್ಧಿ ಪರವಾಗಿದ್ದು, ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದ್ದು,ಬಡವರ ಪರ ಅಭಿವೃದ್ಧಿ ಬಜೆಟ್ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಮ್ ಗೇರುಕಟ್ಟೆ ತಿಳಿಸಿದ್ದಾರೆ.


ರಾಜ್ಯದ ರೈತರು, ಮಹಿಳೆಯರು, ಯುವಕರು ಹಾಗೂ ಅಹಿಂದ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿದ ಯೋಜನೆಗಳು ಸ್ವಾಗತಾರ್ಹವಾಗಿವೆ ಎಂದು ಅವರು ಹೇಳಿದ್ದಾರೆ. ಕೃಷಿ, ಶಿಕ್ಷಣ, ವಸತಿ, ಆರೋಗ್ಯ, ಅರಣ್ಯ, ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿರುವುದು ಸಂತಸದ ವಿಷಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಅದೇ ರೀತಿ ಕರಾವಳಿ ಕರ್ನಾಟಕದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರವಾಸೋದ್ಯಮ, ಮೀನುಗಾರಿಕೆ ಹಾಗೂ ಪೊಲೀಸ್ ಠಾಣೆಗಳ ಬಲವರ್ಧನೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಜೆಟ್ನಲ್ಲಿ ಒತ್ತು ನೀಡಲಾಗಿದೆ. ಇದರಿಂದ ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಮತ್ತುರಾಜ್ಯದ ಸಮಗ್ರ ಅಭಿವೃದ್ಧಿಯ ಜೊತೆಗೆ ಕರಾವಳಿ ಭಾಗದ ಪ್ರಗತಿಗೂ ಈ ಬಜೆಟ್ ಮಹತ್ವದ ಪಾತ್ರ ವಹಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.









